
ಬೀದರ್: ಕರ್ನಾಟಕ ಗೃಹ ಮಂಡಳಿಯು ಬೀದರ್ ತಾಲ್ಲೂಕಿನ ಜನವಾಡ ಹೋಬಳಿಯ ಅಲಿಯಂಬರ್ ಗ್ರಾಮದ ಬಳಿ ವಸತಿ ಯೋಜನೆ ಜಾರಿಗೆ ತರುತ್ತಿದ್ದು, ನಿವೇಶನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.30ರ ವರೆಗೆ ವಿಸ್ತರಿಸಲಾಗಿದೆ.
ಈ ವಸತಿ ಯೋಜನೆಯಡಿ ನಿವೇಶನ ಪಡೆಯಲು ಆಸಕ್ತಿ ಇರುವವರಿಗೆ ನೆರವಾಗಲು ನಗರದ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಕಚೇರಿಯಲ್ಲಿ ವಿಶೇಷ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೆರವು ನೀಡಲಾಗುತ್ತದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಕಂಪ್ಯೂಟರ್ ಸೆಂಟರ್‌ಗೆ ಹೋಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೆಲವರಿಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹವರಿಗೆ ನೆರವಾಗಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಇದರ ಪ್ರಯೋಜನ ಪಡೆಯಬೇಕು ಎಂದು ಗುರುವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕರ್ನಾಟಕ ಗೃಹ ಮಂಡಳಿಯು ಅಲಿಯಂಬರ್ ಗ್ರಾಮದ ಸರ್ವೇ ಸಂಖ್ಯೆ 231/1, 237/1 ಮತ್ತು ಇತರ ಸರ್ವೇ ನಂಬರ್‌ಗಳಲ್ಲಿರುವ ಒಟ್ಟು 94.12 ಎಕರೆ ಜಮೀನಿನಲ್ಲಿ ಸುಸಜ್ಜಿತ ವಸತಿ ಯೋಜನೆ ರೂಪಿಸಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಬೇಡಿಕೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆರಂಭಿಕ ಠೇವಣಿಯೊಂದಿಗೆ ಆನ್‌ಲೈನ್‌ನಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.