ADVERTISEMENT

ಐಎಎಸ್‌ ಪರೀಕ್ಷೆ ಸಿದ್ಧತೆ ತರಬೇತಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 9:00 IST
Last Updated 28 ಫೆಬ್ರುವರಿ 2026, 9:00 IST
ಮಹೇಶ್  ಗೋರನಾಳಕರ್
ಮಹೇಶ್  ಗೋರನಾಳಕರ್   

ಪ್ರಜಾವಾಣಿ ವಾರ್ತೆ

ಬೀದರ್‌: ‘ಮಾತೋಶ್ರೀ ರಮಾತಾಯಿ ಅಂಬೇಡ್ಕರ್‌ ಅವರ 128ನೇ ಜನ್ಮದಿನದ ಅಂಗವಾಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಐಎಎಸ್‌, ಕೆಎಎಸ್‌ ಪರೀಕ್ಷೆ ಸಿದ್ಧತೆ ಬಗ್ಗೆ ತರಬೇತಿ, ಕಾನೂನು ಅರಿವು–ನೆರವು ಮತ್ತು ಜಿಲ್ಲಾಮಟ್ಟದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಗುರುವಾರ (ಫೆ.28) ಹಮ್ಮಿಕೊಳ್ಳಲಾಗಿದೆ’ ಎಂದು ಬುದ್ದ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ್‌ ಗೋರನಾಳಕರ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ಅಧ್ಯಕ್ಷ ಶಿವಕುಮಾರ್‌ ಉದ್ಘಾಟಿಸುವರು. ರಮಾತಾಯಿ ಅಂಬೇಡ್ಕರ್ ಜಯಂತಿ ಉತ್ಸವ ಸಮಿತಿ ಅಧ್ಯಕ್ಷೆ ನಂದಮ್ಮ ಕುಂದೆ ಅಧ್ಯಕ್ಷತೆ ವಹಿಸುವರು. ಸಮಾಜದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ADVERTISEMENT

ಮನೆ ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಶಿನಾಥ ಚಲುವಾ ಮಾತನಾಡಿ, ರಮಾತಾಯಿ ಅಂಬೇಡ್ಕರ್ ಅವರು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ವನಂದಾ ಗ್ರಾಮದಲ್ಲಿ 1898ರ ಫೆಬ್ರುವರಿ 7ರಂದು ಜನಿಸಿದ್ದರು. ಅವರು ಕೂಡ ಅಂಬೇಡ್ಕರ್‌ರಂತೆ ಸಮಾಜದ ಶೋಷಿತ ವರ್ಗದವರ ಏಳಿಗೆಗೆ ಶ್ರಮಿಸಿದವರು. ಅವರ ತ್ಯಾಗದ ಬದುಕು ಸಮಾಜಕ್ಕೆ ಪರಿಚಯಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಯುವ ಮುಖಂಡ ಶರಣು ಫುಲೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.