ADVERTISEMENT

ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಿರಂಗಾ‌ ಯಾತ್ರೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 5:45 IST
Last Updated 14 ಆಗಸ್ಟ್ 2025, 5:45 IST
<div class="paragraphs"><p>ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ</p></div>

ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ

   

ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದಲ್ಲಿ ಗುರುವಾರ ತಿರಂಗಾ ಯಾತ್ರೆ ಏರ್ಪಡಿಸಲಾಗಿತ್ತು.

ನಗರದ ರಾಣಿ ಚನ್ನಮ್ಮ ವೃತ್ತದಿಂದ ಆರಂಭಗೊಂಡ ತಿರಂಗಾ ಯಾತ್ರೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಮಠಾಧೀಶರು, ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಕಾಲೇಜು ವಿದ್ಯಾರ್ಥಿಗಳು ತ್ರಿವರ್ಣ ಧ್ವಜಗಳೊಂದಿಗೆ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಸಂಭ್ರಮದೊಂದಿಗೆ ಧ್ವಜ ಬೀಸುತ್ತ ನಡೆದರು. ದಟ್ಟ ಕಾರ್ಮೋಡದ ನಡುವೆ ತ್ರಿವರ್ಣ ಧ್ವಜಗಳು ರಾರಾಜಿಸಿದವು.

ADVERTISEMENT

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ‌ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್‌ ಚನಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.