ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಿ ಆಚರಿಸಿ: ರಮೇಶ ಪೆದ್ದೇ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 13:47 IST
Last Updated 12 ಸೆಪ್ಟೆಂಬರ್ 2022, 13:47 IST
ಕಮಲನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ರಮೇಶ ಪೆದ್ದೇ ಮಾತನಾಡಿದರು
ಕಮಲನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ರಮೇಶ ಪೆದ್ದೇ ಮಾತನಾಡಿದರು   

ಕಮಲನಗರ: ‘ಪ್ರಸ್ತುತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಇರುವುದರಿಂದ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಬೇಕು’ ಎಂದು ತಹಶೀಲ್ದಾರ್ ರಮೇಶ ಪೆದ್ದೇ ತಿಳಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸೆ.17ರಂದು ಬೆಳಿಗ್ಗೆ 8.30ಕ್ಕೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸೆ.16 ಮತ್ತು 17ರಂದು ಎರಡು ದಿನ ದೀಪಾಲಂಕಾರ ಮಾಡಬೇಕು ಎಂದು ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹಣಮಂತರಾವ ಕೌಟಗೆ, ಕಸಾಪ ಕಮಲನಗರ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಶಾಂತ ಮಠಪತಿ, ತಾ.ಪಂ. ಮಾಜಿ ಅಧ್ಯಕ್ಷ ಶ್ರೀರಂಗ ಪರಿಹಾರ, ಪ್ರೊ.ಎಸ್.ಎನ್.ಶಿವಣಕರ್, ಮುಖಂಡ ಶಿವಾನಂದ ವಡ್ಡೆ, ಬಾಲಾಜಿ ತೆಲಂಗ್, ನಾಗೇಶ ಪತ್ರೆ, ಧನರಾಜ ಭವರಾ, ಸಂತೋಷ ಸುಲಾಖೆ, ಶ್ರೀಕಾಂತ, ವೀರಭಧ್ರಪ್ಪ, ಕಲ್ಯಾಣರಾವ, ಏಕನಾಥ ಸಿಂಧೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.