ಬೀದರ್: ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ ಭರ್ತಿಯಾಗಿದೆ. ಗೋದಾವರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ 729 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.
ಎರಡು ಕ್ರಸ್ಟ್ ಗೇಟ್‌ಗಳನ್ನು ತೆರೆದು 600 ಕ್ಯೂಸೆಕ್ ನೀರು ಹರಿಯ ಬಿಡಲಾಗಿದೆ. 7.691 ಟಿಎಂಸಿ ಸಾಮರ್ಥ್ಯದ ಜಲಾಶಯ ಐದು ವರ್ಷಗಳ ಅವಧಿಯಲ್ಲಿ ಎರಡನೇ ಬಾರಿ ತುಂಬಿದೆ.
ನದಿ ಹಾಗೂ ಕಾಲುವೆ ಪಕ್ಕದ ಗ್ರಾಮಗಳ ಜನರು ಎಚ್ಚರ ವಹಿಸಬೇಕು ಎಂದು ಕಾರಂಜಾ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.