
ಬಾಪುರ(ಜನವಾಡ): ‘ಬಿಜೆಪಿ ಕಾರ್ಯಕರ್ತರು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧರಾಗಬೇಕು’ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ತಾಲ್ಲೂಕಿನ ಬಾಪುರ ಕ್ರಾಸ್ ಸಮೀಪದ ಬಿಜೆಪಿ ಬೀದರ್ ದಕ್ಷಿಣ ಮಂಡಲ ಕಚೇರಿಯಲ್ಲಿ ಭಾನುವಾರ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿ, ‘ತಮ್ಮ ಅಧಿಕಾರ ಅವಧಿಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಿಳಿಸಬೇಕು. ಚುನಾವಣೆಯನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು ಸಂಘಟನೆ ಬಲಪಡಿಸಬೇಕು. ಬೂತ್, ಮಂಡಲ, ಮುಂಚೂಣಿ ಮೋರ್ಚಾಗಳನ್ನು ಇನ್ನಷ್ಟು ಸಕ್ರಿಯಗೊಳಿಸಬೇಕು. ಜನ ಸಂಪರ್ಕ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು’ ಎಂದು ತಿಳಿಸಿದರು.
ಬಿಜೆಪಿ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ಗುರುನಾಥ ರಾಜಗೀರಾ, ಪ್ರಧಾನ ಕಾರ್ಯದರ್ಶಿ ಸಂಜುಕುಮಾರ ಕೋಳಿ, ಮುಖಂಡರಾದ ರಾಜರೆಡ್ಡಿ, ಮಾಣಿಕಪ್ಪ ಕಾಶೆಂಪುರ, ಜಗನ್ನಾಥ ಪಾಟೀಲ, ಬಾಬುರಾವ್ ಮಲ್ಕಾಪುರ, ಶಿವಕುಮಾರ ಸ್ವಾಮಿ, ಸಂತೋಷ್ ರೆಡ್ಡಿ, ನಾಗಭೂಷಣ ಕಮಠಾಣೆ, ಬಸವರಾಜ ಪವಾರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.