ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಬೀದರ್: ಲೋಕಸಭೆ ಚುನಾವಣೆಗೆ ಏ. 12ರಿಂದ 22ರ ವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಚುನಾವಣಾಧಿಕಾರಿ ಕಚೇರಿ ಸುತ್ತಮುತ್ತ ಪ್ರತಿಭಟನೆ, ರ್‍ಯಾಲಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.
ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಬರುವ ಅಭ್ಯರ್ಥಿಗಳಿಗೆ ತೊಂದರೆ ಆಗದಿರಲೆಂದು ಈ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹರಳಯ್ಯ ವೃತ್ತದ ವರೆಗೆ, ಮಹಾವೀರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ, ರ್‍ಯಾಲಿ ನಡೆಸಲು ಅವಕಾಶ ಇರುವುದಿಲ್ಲ ಎಂದು ಸೋಮವಾರ ತಿಳಿಸಿದ್ದಾರೆ.
ಪ್ರತಿಭಟನೆ, ರ್‍ಯಾಲಿ ನಡೆಸುವವರು ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಬಹುದು. ಬೀದರ್ ಜಿಲ್ಲಾಧಿಕಾರಿ ಚುನಾವಣಾಧಿಕಾರಿಯಾಗಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಹಾಯಕ ಚುನಾವಣಾಧಿಕಾರಿ ಆಗಿ ಕೆಲಸ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.