ADVERTISEMENT

ಬೀದರ್: ಮಚ್ಚಿನಿಂದ ಹೊಡೆದು ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 7:16 IST
Last Updated 2 ಅಕ್ಟೋಬರ್ 2025, 7:16 IST
   

ಬೀದರ್: ಚಿಟಗುಪ್ಪ ತಾಲ್ಲೂಕಿನ ಮನ್ನಾಏಖ್ಖೆಳ್ಳಿಯಲ್ಲಿ ಗುರುವಾರ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ.

ಗಣಪತಿ ವೈಜನಾಥ್ ವಗ್ಗೆರ್ ಮೃತ ವ್ಯಕ್ತಿ. ಹಳ್ಳಿಖೇಡ್ ರಸ್ತೆಯ ಜೆಸ್ಕಾಂ ಕಚೇರಿ ಬಳಿ ಘಟನೆ ನಡೆದಿದೆ.

ಮೃತರು ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುಹಮ್ಮದ್ ಮಸ್ತಾನ್ ನೂರೊದ್ದೀನ್ ಅವರ ಆಪ್ತರಾಗಿದ್ದರು.

ADVERTISEMENT

ಕೊಲೆಗೆ ಕಾರಣವೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮನ್ನಾಏಖ್ಖೆಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.