ADVERTISEMENT

ಬೀದರ್: ಪಿಯುನಲ್ಲಿ ಜಿಲ್ಲೆಗೆ ಒಂದಂಕಿ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 4:41 IST
Last Updated 24 ಏಪ್ರಿಲ್ 2024, 4:41 IST
ಬೀದರ್‌ನ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಬೀದರ್‌ನ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು    

ಬೀದರ್: ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಉದ್ಘಾಟಿಸಿ, ಬರುವ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ಒಂದಂಕಿಯಲ್ಲಿ ತರಲು ಪ್ರಯತ್ನಿಸಲಾಗುವುದು ಎಂದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ವರ್ಷ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಲ್ಲ ಶಿಕ್ಷಣ ಸಂಸ್ಥೆಗಳು ಕೈಜೋಡಿಸಿದ್ದಲ್ಲಿ ಫಲಿತಾಂಶದಲ್ಲಿ ಇನ್ನಷ್ಟು ಸುಧಾರಣೆ ಕಾಣಬಹುದು ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಕಠಿಣ ಪರಿಶ್ರಮದ ಮೂಲಕ ಅದನ್ನು ನನಸಾಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು. ಆದರ್ಶ ವ್ಯಕ್ತಿಗಳಾಗಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.

ಮಂದಕನಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಚಂದ್ರಕಾಂತ ಗಂಗಶೆಟ್ಟಿ, ಶ್ರೀ ಸ್ವಾಮಿ ನರೇಂದ್ರ ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎಂ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.