ಬೀದರ್: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಕೀಲ್ ಮೌಲಾನಾ ಸಾಬ್ ನೂರ್ ಬಾಗ್ ಶಿಕ್ಷೆಗೊಳಗಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಚಿನ್ ಕೌಶಿಕ್ ಆರ್.ಎನ್. ಅವರು ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿದ್ದಾರೆ. ದಂಡ ಭರಿಸಲು ತಪ್ಪಿದ್ದಲ್ಲಿ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.
ದಂಡದ ₹50 ಸಾವಿರ ಮೊತ್ತವನ್ನು ನೊಂದ ಬಾಲಕಿಗೆ ನೀಡಬೇಕು. ರಾಜ್ಯ ಸರ್ಕಾರ ₹3 ಸಾವಿರ ಭರಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನೊಂದ ಬಾಲಕಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಟಿ. ಸಿದ್ದೇಶ್ವರ ವಾದ ಮಂಡಿಸಿದ್ದಾರೆ.
2023ರ ಜುಲೈ 6ರಂದು ಬೀದರ್ ತಾಲ್ಲೂಕಿನಲ್ಲಿ ಘಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.