ADVERTISEMENT

ಬೀದರ್‌: ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಶರಣಬಸಯ್ಯ ತಿಳಿ ನಿಧನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:23 IST
Last Updated 3 ಜುಲೈ 2025, 15:23 IST
   

ಬೀದರ್‌: ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಶರಣಬಸಯ್ಯ ತಿಳಿ (83) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ನಿಧನರಾದರು.

ಮೃತರಿಗೆ ಪತ್ನಿ ಭಾರತಿ ವಸ್ತ್ರದ್, ‘ಸುಧಾ’ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ರಶ್ಮಿ ಎಸ್‌. ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.

ಬೀದರ್‌ನ ಬಸವನಗರದ ಅವರ ಸ್ವಗೃಹದಲ್ಲಿ ಗುರುವಾರ ಮಧ್ಯರಾತ್ರಿ ವರೆಗೆ ಪಾರ್ಥೀವ ಶರೀರವನ್ನು ದರ್ಶನಕ್ಕೆ ಇರಿಸಲಾಗುತ್ತದೆ. ಮೃತರ ಅಂತ್ಯಕ್ರಿಯೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಯರಡೋಣಿ ಗ್ರಾಮದ ಜಮೀನಿನಲ್ಲಿ ಶುಕ್ರವಾರ (ಜು.4) ಮಧ್ಯಾಹ್ನ 12.30ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.