
ಬೀದರ್: ಸರ್ಕಾರಿ ನಿವೃತ್ತ ನೌಕರರ ಸಂಘ ಬೀದರ್ ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ನಿವೃತ್ತ ನೌಕರರ ಸಮ್ಮೇಳನ ಹಾಗೂ ಕಲಬುರಗಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಭೆ ಸೋಮವಾರ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ಎಲ್. ಭೈರಪ್ಪ, ನಿವೃತ್ತ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.
ಈಗಾಗಲೇ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಆರೋಗ್ಯ ಸಂಜೀವಿನಿ ಭಾಗ್ಯ ಯೋಜನೆಗೆ ಸಂಬಂಧಿಸಿದ ಆದೇಶ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ. ನಿವೃತ್ತ ನೌಕರರು ಸಮಾಜಕ್ಕೆ ನೀಡಿದ ಸೇವೆ ಸರ್ಕಾರ ಮರೆಯಬಾರದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ರಂಗೇಗೌಡ, ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷ ಸೂರ್ಯಕಾಂತ ಕದಮ್, ರಾಜ್ಯ ಸಂಘದ ಖಜಾಂಚಿ ಎಸ್.ಎಂ. ಆನಂದಪ್ಪ, ಎಸ್. ಶಾರದಮ್ಮ, ಎನ್. ನಂಜಪ್ಪ, ಗುರುಲಿಂಗ ಸ್ವಾಮೀಜಿ, ಮುನಿದೇವಕುಮಾರ, ಪ್ರಭಾಕರ ಸೋನೆ, ಕರ್ನಾಟಕ ಸಾಹಿತ್ಯ ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಹೆಬ್ಬಾಳೆ ಪಾಲ್ಗೊಂಡಿದ್ದರು. ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ಅವರಿಗೆ ‘ಅನ್ನದಾನಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖಾಜಾ ಶೇಖ್ ಅಜರ್ ಹಾಗೂ ಮೌಲಾನಾ ಅತಿಕುರ್ ರೆಹಮಾನ್ ಅವರನ್ನು ಸನ್ಮಾನಿಸಲಾಯಿತು.
ಶಿವಕುಮಾರ ಪಾಂಚಾಳ ವಚನ ಸಂಗೀತ ಹಾಗೂ ಪ್ರಾರ್ಥನೆ ನಡೆಸಿಕೊಟ್ಟರು. ಜಿಲ್ಲಾ ಸಂಘದ ಅಧ್ಯಕ್ಷ ನಾಗಪ್ಪ ಜಂಬಗಿ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಕುಚಬಾಳ ನಿರೂಪಿಸಿದರು. ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಸವರಾಜ ಮರೆ ವಂದಿಸಿದರು. ಸಂಘದ ಸಂಘಟನಾ ಕಾರ್ಯದರ್ಶಿ ದೇವೇಂದ್ರ ಡಿಗ್ಗಿ ವರದಿ ವಾಚಿಸಿದರು. ಕಮಲನಗರ ತಾಲ್ಲೂಕು ಅಧ್ಯಕ್ಷ ರಘುನಾಥ ರೊಟ್ಟೆ ಅತಿಥಿಗಳ ಪರಿಚಯ ಮಾಡಿದರು. 80 ವರ್ಷ ಮೇಲಿನ ಹಿರಿಯ ನಿವೃತ್ತ ನೌಕರರನ್ನು ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.