ADVERTISEMENT

ಹುಮನಾಬಾದ್ | ಸೇತುವೆಗೆ ಸ್ಕೂಟಿ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 14:28 IST
Last Updated 8 ಫೆಬ್ರುವರಿ 2026, 14:28 IST
<div class="paragraphs"><p>ಅಪಘಾತ</p></div>

ಅಪಘಾತ

   

ಸಾಂದರ್ಭಿಕ ಚಿತ್ರ

ಹುಮನಾಬಾದ್ (ಬೀದರ್‌ ಜಿಲ್ಲೆ): ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಹಳ್ಳಿಖೇಡ್‌ (ಬಿ) ಪಟ್ಟಣ ಸಮೀಪ ಭಾನುವಾರ ನಡೆದಿದೆ.

ADVERTISEMENT

ಬಸವಕಲ್ಯಾಣ ತಾಲ್ಲೂಕಿನ ರಾಜೇಶ್ವರ ಗ್ರಾಮದ ವೆಂಕಟ್ (40) , ಅವರ ಪತ್ನಿ ಶಿಲ್ಪಾ (35), ಮಗಳು ರಕ್ಷಿತಾ (12) ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯ ಮಗ ದಿಗಂಬರ್ (15) ಗಂಭೀರವಾಗಿ ಗಾಯಗೊಂಡಿದ್ದು, ಬ್ರಿಮ್ಸ್‌ಗೆ ದಾಖಲಿಸಲಾಗಿದೆ.

ಕುಟುಂಬ ಸಮೇತರಾಗಿ ಬೀದರ್‌ನಿಂದ ಸ್ವಗ್ರಾಮದ ಕಡೆಗೆ ಸ್ಕೂಟಿ ಮೇಲೆ ಹೋಗುವಾಗ ಈ ಘಟನೆ ಜರುಗಿದೆ. ಹಳ್ಳಿಖೇಡ್ (ಬಿ) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.