ಅಮಾನತು
ಬೀದರ್: ಶಾಲೆಯಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮ ಕೈಗೊಳ್ಳದೆ ಕರ್ತವ್ಯಲೋಪ ಎಸಗಿದಕ್ಕಾಗಿ ತಾಲ್ಲೂಕಿನ ಬಗದಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.
ಅಮಾನತಿನ ಅವಧಿಯಲ್ಲಿ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.
ಆಗಸ್ಟ್ 7ರಂದು ಸದರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ರೋಹನ ರಾಬರ್ಟ್ ಮಧ್ಯಾಹ್ನದ ಬಿಸಿಯೂಟ ಸೇವಿಸುವಾಗ ಶಾಲೆಯ ಗೋಡೆ ಬಿದ್ದು ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.