
ಬೀದರ್: ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹3,200 ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕರಬಸಪ್ಪ ಹುಡಗಿ ಉರುಳು ಸೇವೆ ನಡೆಸಿದರು.
ಇಲ್ಲಿಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಉರುಳು ಸೇವೆ ಶಿವಾಜಿ ವೃತ್ತದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿ ವರೆಗೆ ಜರುಗಿತು.
ಬಿಳಿಕ ಮಾತನಾಡಿದ ಅವರು, ‘ನಮ್ಮ ಬೇಡಿಕೆಯನ್ನು ಸರ್ಕಾರ ಹಾಗೂ ಜಿಲ್ಲಾ ಆಡಳಿತ ತಕ್ಷಣ ಈಡೇರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಿಸಾನ್ ಮಹಾಸಭಾದ ಕಲಬುರಗಿ ವಿಭಾಗದ ಅಧ್ಯಕ್ಷ ಮೌಲಾ ಮುಲ್ಲಾ, ಆದಿನ್ನಾಥ ಹೀರಾ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಮುಖಂಡರಾದ ಈಶ್ವರಸಿಂಗ ಠಾಕೂರ, ರಾಜಶೇಖರ ನಾಗಮೂರ್ತಿ, ಪೀರಪ್ಪಾ ಔರಾದೆ, ಜಗನ್ನಾಥ ಚಿಲ್ಲಾಬಟೆ, ರೈತ ಸಂಘದ ಮುಖಂಡರಾದ ಖಾಸೀಮ್ ಅಲಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ ಪಾಟೀಲ್ ಅತಿವಾಳ, ಬಾಬುರಾವ ಹೊನ್ನಾ,ಶಿವರಾಯ ಮುದಾಳೆ, ಖಾಶೆಪ್ಪಾ ಬೇಲೂರ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.