ADVERTISEMENT

ಲಾಕ್‍ಡೌನ್ ಅವಧಿ ವಿದ್ಯುತ್ ಬಿಲ್ ಮನ್ನಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 17:17 IST
Last Updated 6 ಜುಲೈ 2020, 17:17 IST
ಮೂರು ತಿಂಗಳ ಲಾಕ್‍ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾದ ಬೀದರ್ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು

ಬೀದರ್: ರಾಜ್ಯ ಸರ್ಕಾರ ಮೂರು ತಿಂಗಳ ಲಾಕ್‍ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.

ಪಕ್ಷದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ನಿಯೋಗದಲ್ಲಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಲಾಕ್‍ಡೌನ್‍ನಿಂದ ಜನ ಕೆಲಸ, ವ್ಯಾಪಾರ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಅಂತಹದ್ದಲ್ಲಿ ವಿದ್ಯುತ್ ಬಿಲ್ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವುದು ಅವೈಜ್ಞಾನಿಕವಾಗಿದೆ. ಬಿಲ್‍ನಲ್ಲಿ ಶೇ 50 ರಷ್ಟಾದರೂ ರಿಯಾಯಿತಿ ಕೊಡಬೇಕು ಎಂದು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮುಬಾಶಿರ್ ಸಿಂದೆ ನಿಯೋಗದ ನೇತೃತ್ವದ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.