ಬೀದರ್: ಬೀದರ್ ಉತ್ಸವ ಪ್ರಯುಕ್ತ ನಗರದಲ್ಲಿ ಶುಕ್ರವಾರ ನಡೆದ ಪಾರಂಪರಿಕ ನಡಿಗೆಯಲ್ಲಿ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ 10 ಸಾವಿರ ಉಪಾಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಿಸಲಾಯಿತು.
ಕೋಟೆ ಪ್ರದೇಶದಲ್ಲಿ ಶಾಹೀನ್ ಕಾಲೇಜು ಸಿಬ್ಬಂದಿ, ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಉಪಾಹಾರ ಪೊಟ್ಟಣ ವಿತರಣೆ ಮಾಡಿದರು.
ಪಾರಂಪರಿಕ ನಡಿಗೆ ವೇಳೆ ಸಾರ್ವಜನಿಕರ ಅನುಕೂಲಕ್ಕಾಗಿ ಉಪಾಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಶಾಹೀನ್ ಕಾಲೇಜು ತನ್ನ ಸಾಮಾಜಿಕ ಕಾರ್ಯಗಳನ್ನು ನಿರಂತರ ಮುಂದುವರಿಸಲಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.