ಚಿಟಗುಪ್ಪ: ತಾಲ್ಲೂಕಿನ ನಿರ್ಣಾದಿಂದ ಉಡಬಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಶುಕ್ರವಾರ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಉಡಬಾಳ ಗ್ರಾಮದ ನಿವಾಸಿ ವೈಜಪ್ಪ ಶಂಕ್ರೆಪ್ಪ ಗೋಪಾ (48) ಮೃತರು.
ನಿರ್ಣಾದಿಂದ ಉಡಬಾಳಕ್ಕೆ ಹೋಗುವಾಗ ಎದುರುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಈ ಸಂಬಂಧ ಮನ್ನಾಎಖ್ಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.