
ಪ್ರಜಾವಾಣಿ ವಾರ್ತೆ
ಔರಾದ್: ಬೀದರ್-ಔರಾದ್ ಹೆದ್ದಾರಿಯಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಶುಕ್ರವಾರ ಸಂಜೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಔರಾದ್ ತಾಲ್ಲೂಕಿನ ಬಲ್ಲೂರ (ಜೆ) ಗ್ರಾಮದ ಬಸವರಾಜ ಕಂಟೆಪ್ಪ (34) ಮೃತರು. ಮೃತ ಬಸವರಾಜ ಬಲ್ಲೂರ ಗ್ರಾಮದಿಂದ ಕೌಠಾಗೆ ಹೋಗುವಾಗ ಹಿಂದಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಮೃತರಿಗೆ ತಂದೆ-ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.