ಬೀದರ್: ‘ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಡಳಿತಾರೂಢ ಬಿಜೆಪಿಯು ಸರ್ಕಾರಿ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡಿದೆ. ಹಣ, ಹೆಂಡದ ಹೊಳೆ ಹರಿಸಿದರೂ ಬಿಜೆಪಿಗೆ ಸೋಲು ಖಚಿತ. ಇಲ್ಲಿ ಮಾಲಾ ನಾರಾಯಣರಾವ್ ಗೆಲುವು ನಿಶ್ಚಿತ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
‘ಉಪ ಚುನಾವಣೆಗೆ ಮುನ್ನ ತರಾತುರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ನಾಟಕ ಆಡಿದ ಕಲ್ಯಾಣ ಕರ್ನಾಟಕ, ರೈತ ವಿರೋಧಿ ಬಿಜೆಪಿ ಸರ್ಕಾರವನ್ನು ಕ್ಷೇತ್ರದ ಜನತೆ ತಿರಸ್ಕರಿಸಿರುವುದು ಮತ ಎಣಿಕೆ ದಿನ ಬಹಿರಂಗವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.