
ಪ್ರಜಾವಾಣಿ ವಾರ್ತೆ
ಬಸವಕಲ್ಯಾಣ: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸಂಜೀವ ಸುಗೂರೆ ಹಾಗೂ ಅವರ ಪುತ್ರ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷ ಸಾಗರ ಸುಗೂರೆ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳವರೆಗೆ ಉಚ್ಚಾಟಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರಿಂದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಆದೇಶದ ಮೇರೆಗೆ ಇವರನ್ನು ಉಚ್ಛಾಟಿಸಲಾಗಿದೆ ಎಂದು ಪಕ್ಷದ ನಗರ ಘಟಕದ ಅಧ್ಯಕ್ಷ ಸಿದ್ದು ಬಿರಾದಾರ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಸಂಜೀವ ಸುಗೂರೆ ಮತ್ತು ಶಾಸಕ ಶರಣು ಸಲಗರ ಅವರ ಮಧ್ಯೆ ಕೆಲ ದಿನಗಳ ಹಿಂದೆ ಆರೋಪ ಪ್ರತ್ಯಾರೋಪ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.