ADVERTISEMENT

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಅರುಣ್ ಸಿಂಗ್

ಬೀದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 14:29 IST
Last Updated 29 ಸೆಪ್ಟೆಂಬರ್ 2022, 14:29 IST
ಬೀದರ್‌ನ ಘಾಳೆ ಫಂಕ್ಷನ್ ಹಾಲ್‍ನಲ್ಲಿ ಗುರುವಾರ ಆಯೋಜಿಸಿದ್ದ ಬೀದರ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉದ್ಘಾಟಿಸಿದರು. ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಇದ್ದಾರೆ
ಬೀದರ್‌ನ ಘಾಳೆ ಫಂಕ್ಷನ್ ಹಾಲ್‍ನಲ್ಲಿ ಗುರುವಾರ ಆಯೋಜಿಸಿದ್ದ ಬೀದರ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉದ್ಘಾಟಿಸಿದರು. ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಇದ್ದಾರೆ   

ಬೀದರ್: ‘ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಗರದ ಘಾಳೆ ಫಂಕ್ಷನ್ ಹಾಲ್‍ನಲ್ಲಿ ಗುರುವಾರ ನಡೆದ ಬೀದರ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಕಾರಣ ಜನ ಬೆಂಬಲ ಇದೆ. ಮುಂದೆಯೂ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್‌ ಮತ್ತೆ ನಿರಾಶೆಯಾಗಲಿದೆ ಎಂದರು.

ADVERTISEMENT

ಬೀದರ್‌ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ. ಬರುವ ಚುನಾವಣೆಯಲ್ಲಿ ಎಲ್ಲ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗವಂತೆ ಈಗಿನಿಂದಲೇ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಮಾತನಾಡಿ, ಕಾಂಗ್ರೆಸ್‌ನವರು ಆರ್‌ಎಸ್ಎಸ್‌ ನಿಷೇಧಿಸಬೇಕು ಎಂದು ಹೇಳುತ್ತಿರುವುದು ಅಜ್ಞಾನದ ಪರಮಾವಧಿಯಾಗಿದೆ. ಆರ್‌ಎಸ್ಎಸ್‌ ಸದಸ್ಯರಾಗಿದ್ದವರೇ ಇಂದು ದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ತೊಡಕಾಗಿ ಪರಿಣಮಿಸಿದ ಕಾರಣ ನಿಷೇಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಮಾತನಾಡಿದರು.

ಮೂಲಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಜಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಬಿಜೆಪಿ ಕಲಬರಗಿ ವಿಭಾಗೀಯ ಪ್ರಮುಖ ಈಶ್ವರಸಿಂಗ್ ಠಾಕೂರ್, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ಮುಖಂಡರಾದ ಗುರುನಾಥ ಕೊಳ್ಳೂರ್, ಸೂರ್ಯಕಾಂತ ನಾಗಮಾರಪಳ್ಳಿ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಎಸ್. ಪಾಟೀಲ ಗಾದಗಿ, ರಾಜ್ಯ ಕೈಗಾರಿಕೆ ಬುಡಾ ಅಧ್ಯಕ್ಷ ಬಾಬು ವಾಲಿ, ಶಿವರಾಜ ಗಂದಗೆ, ಶಶಿ ಹೊಸಳ್ಳಿ, ಡಿ.ಕೆ.ಸಿದ್ರಾಮ, ಅರಿಹಂತ ಸಾವಳೆ ಇದ್ದರು.

ವಿಜಕುಮಾರ ಪಾಟೀಲ ಗಾದಗಿ ನಿರೂಪಿಸಿದರು.

ಬೆಳಿಗ್ಗೆ ಬಿಜೆಪಿ ಜಿಲ್ಲಾ ಘಟಕದ ಕೋರ್ ಕಮಿಟಿ ಸಭೆ, ಮಧ್ಯಾಹ್ನ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ನಡೆಯಿತು. ಏಕ ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮದ ಅಂಗವಾಗಿ ಝರಣಿ ನರಸಿಂಹ ದೇಗುಲ, ಬೆನಕನಹಳ್ಳಿ ದುರ್ಗಾಮಾತಾ ಮಂದಿರ, ಗುರುದ್ವಾರ, ಪಾಪನಾಶ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.