ಬೀದರ್: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನಗರದ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸ್ಥಳೀಯ ಬಿಜೆಪಿ ಮುಖಂಡರು, ಅಟಲ್ ಬಿಹಾರಿ ವಾಜಪೇಯಿ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ಅಟಲ್ ವಿರಾಸತ್ ಬಹುಭಾಷಾ ಕವಿಗೋಷ್ಠಿಯ ವರದಿ ನೀಡಿದರು.
ಮುಂಬರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕವಿಗೋಷ್ಠಿ ಕವನ ಸಂಕಲನವನ್ನು ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ವಿಜಯೇಂದ್ರ ಅವರು ಸ್ಪಂದಿಸಿದರು.
ರಾಜ್ಯ ಬಿಜೆಪಿ ಕಾರ್ಯದರ್ಶಿಯೂ ಆದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ವಾಜಪೇಯಿ ಶತಮಾನೋತ್ಸವ ಸಮಿತಿಯ ಜಿಲ್ಲಾ ಸಂಚಾಲಕ ಬಾಬುವಾಲಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಯರನಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.