ಬೀದರ್: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಿದರು. ಘಟನೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಯುವತಿಗೆ ಅಮಲು ಬರುವ ಪದಾರ್ಥ ಕೊಟ್ಟು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.
ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ರೆಡ್ಡಿ ಆಣದೂರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವೀರೇಶ ಸ್ವಾಮಿ, ರಮೇಶ ಕಲ್ಲೂರ, ನಗರ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪಕ್ ಕುಮಾರ ಜಾಧವ, ಬಸವ ಮೂಲಗೆ, ದಕ್ಷಿಣ ಮಂಡಲ ಅಧ್ಯಕ್ಷ ಶಿವುಕುಮಾರ ಸುಲ್ತಾನಪುರೆ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.