ಔರಾದ್: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶಿಸಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಇಲ್ಲಿಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಔಷಧ ಸಿಗಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆದಿದೆ. ಅದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ರಾಜ್ಯ ಸರ್ಕಾರ ರಾಜಕೀಯ ದ್ವೇಷದಿಂದ ಬಡವರ ಕಲ್ಯಾಣ ಯೋಜನೆ ನಿಲ್ಲಿಸುವುದು ಸರಿಯಲ್ಲ. ಕೂಡಲೇ ಈ ಆದೇಶ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ನಾವು ಜನರೊಂದಿಗೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ಬ್ಲಾಕ್ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ ಹಳ್ಳೆ, ಮುಖಂಡ ಶಿವರಾಜ ಅಲ್ಮಾಜೆ, ಧೊಂಡಿಬಾ ನರೋಟೆ, ದಯಾನಂದ ಘುಳೆ, ಶಿವಕುಮಾರ ಗಿರಣೆ, ರಮೇಶ ಗೌಡ, ಶಿವಕುಮಾರ ಮಜಗೆ, ಸಿದ್ರಾಮಪ್ಪ ನಿಡೋದೆ, ಪ್ರಕಾಶ ಅಲ್ಮಾಜೆ, ಸಂದೀಪ ಪಾಟೀಲ, ಆನಂದ ದ್ಯಾಡೆ, ರಾಜಕುಮಾರ ಪಾಟೀಲ, ಸಲಾವುದ್ದೀನ್, ಅಶೋಕ ಉಪ್ಪೆ, ರಾಜಕುಮಾರ ಚಿದ್ರೆ, ಮಲ್ಲಿಕಾರ್ಜುನ ಯಡವೆ, ಚನ್ನಬಸವ ಗಜರೆ, ಮಹೇಶ ಭಾಲ್ಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.