ADVERTISEMENT

ಪಾಪನಾಶ ಶಿವಲಿಂಗ ದೇವಸ್ಥಾನ: ಪೂಜೆಗೆ ಅವಕಾಶ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಪಾಪನಾಶ ದೇಗುಲದ ಪ್ರವೇಶ ದ್ವಾರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಪೂಜೆಗೆ ಪಟ್ಟು; ಪೊಲೀಸರ ಸರ್ಪಗಾವಲು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 6:03 IST
Last Updated 7 ಫೆಬ್ರುವರಿ 2026, 6:03 IST
<div class="paragraphs"><p>ಬಿಜೆಪಿ ಪ್ರತಿಭಟನೆ</p></div>

ಬಿಜೆಪಿ ಪ್ರತಿಭಟನೆ

   

ಬೀದರ್: ನಗರದ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ ಖಂಡ್ರೆ ವಿರುದ್ಧ ಘೋಷಣೆಗಳನ್ನು ಹಾಕುತ್ತಿದ್ದಾರೆ. ಪೂಜೆ ಮಾಡುವವರಿಗೆ ಸ್ಥಳದಿಂದ ತೊಲಗುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ADVERTISEMENT

ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ಅದಕ್ಕೂ ಮುಂಚೆ ಸೇರಿದ ಬಿಜೆಪಿ ಕಾರ್ಯಕರ್ತರು ಪೂಜೆಗೆ ಮುಂದಾಗಿದ್ದರು.. ಆದರೆ, ದೇಗುಲದ‌ ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಪೊಲೀಸರು ತಡೆಯೊಡ್ಡಿದ್ದಾರೆ.

ಕೇಂದ್ರದ ಮಾಜಿಸಚಿವ ಭಗವಂತ ಖೂಬಾ, ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ್, ಎಂ.ಜಿ. ಮುಳೆ,ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ‌ ಪಾಟೀಲ್, ಮುಖಂಡರಾದ ಪ್ರಕಾಶ್ ಖಂಡ್ರೆ, ಶಶಿಧರ ಹೊಸಳ್ಳಿ ಮತ್ತಿತರರು ಪಾಲ್ಗೊಂಡಿದ್ದಾರೆ.

ಕೇಂದ್ರದ 'ಪ್ರಸಾದ' ಯೋಜನೆಯಡಿ ₹22.41 ಕೋಟಿ ಮೊತ್ತದ‌ ಯೋಜನೆಗೆ 2024ರ ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ದೇವಸ್ಥಾನದ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಪುನಃ ಶಂಕುಸ್ಥಾಪನೆ ಮಾಡಬಾರದು ಎನ್ನುವುದು‌ಬಿಜೆಪಿಯ ವಾದ. ಆದರೆ, ಇದು ಶಂಕುಸ್ಥಾಪನೆಯಲ್ಲ, ಕಾಮಗಾರಿಗೆ ಚಾಲನೆ ಕೊಡುವ ಕಾರ್ಯಕ್ರಮ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.