ADVERTISEMENT

ಪಶ್ಚಿಮ ಬಂಗಾಳ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 16:04 IST
Last Updated 8 ಅಕ್ಟೋಬರ್ 2020, 16:04 IST
ಪಶ್ಚಿಮ ಬಂಗಾಳ ಸರ್ಕಾರ ಬಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೀದರ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಪಶ್ಚಿಮ ಬಂಗಾಳ ಸರ್ಕಾರ ಬಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೀದರ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ಬೀದರ್: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಪ್ರತಿಭಟನೆಯನ್ನು ಹತ್ತಿಕ್ಕಿದೆ ಎಂದು ಆರೋಪಿಸಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲಿನ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಪ್ರತಿಭಟನೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುತ್ತಿದೆ ಎಂದು ಆರೋಪಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಅಶ್ರವಾಯು ಪ್ರಯೋಗಿಸಿ, ನಾಡ ಬಾಂಬ್ ದಾಳಿ ನಡೆಸಲಾಗಿದೆ ಎಂದು ಆಪಾದಿಸಿದರು.

ADVERTISEMENT

ಪಶ್ಚಿಮ ಬಂಗಾಳದಲ್ಲಿ ಕಳೆದ ಹಲವು ವರ್ಷಗಳಲ್ಲಿ ಬಿಜೆಪಿಯ ಅನೇಕ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಯುವ ಮೋರ್ಚಾ ಪ್ರತಿಭಟನೆ ವೇಳೆ ದಾಳಿ ನಡೆಸಿರುವುದು ಹೇಯ ಕೃತ್ಯವಾಗಿದೆ. ಇದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಕುಂಬಾರ, ಅಶೋಕ ಹೊಕ್ರಾಣೆ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ ಪಾಲಂ, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಕೋಶಾಧ್ಯಕ್ಷ ಮಹೇಶ್ವರ ಸ್ವಾಮಿ, ಬೀದರ್ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ರಾಜೇಂದ್ರ ಪೂಜಾರಿ, ಶಿವಕುಮಾರ ಸ್ವಾಮಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.