ADVERTISEMENT

ಬೀದರ್‌ ಜಿಲ್ಲಾ ಮುಖಂಡರೊಂದಿಗೆ ವಿಜಯೇಂದ್ರ ಸಭೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 5:44 IST
Last Updated 10 ಜನವರಿ 2026, 5:44 IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಶುಕ್ರವಾರ ಬೀದರ್‌ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಶುಕ್ರವಾರ ಬೀದರ್‌ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು   

ಬೀದರ್‌: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಶುಕ್ರವಾರ ಬೀದರ್‌ ಜಿಲ್ಲೆಯ ಮುಖಂಡರೊಂದಿಗೆ ಸಭೆ ನಡೆಸಿದರು.

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ಮುಂದಿನ ಕಾರ್ಯ ಯೋಜನೆಗಳು ಹಾಗೂ ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು. ಚುನಾವಣಾ ಸಿದ್ಧತೆಗೆ ಚುರುಕಿನ ತಯಾರಿ ನಡೆಸುವುದು, ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆ ಮತ್ತು ಗ್ರಾಮ ಮಟ್ಟದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸೂಚಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಸಂಸದ ಗೋವಿಂದ ಕಾರಜೋಳ, ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ಪ್ರೀತಂ ಗೌಡ, ಶಾಸಕರಾದ ಪ್ರಭು ಚವಾಣ್‌, ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ್, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಕೇಂದ್ರದ ಮಾಜಿಸಚಿವ ಭಗವಂತ ಖೂಬಾ, ಮುಖಂಡರಾದ ರಘುನಾಥರಾವ್‌ ಮಲ್ಕಾಪುರೆ, ಸುಭಾಷ ಕಲ್ಲೂರ, ಪ್ರಕಾಶ ಖಂಡ್ರೆ, ಕುಶಾಲ ಪಾಟೀಲ್‌ ಗಾದಗಿ, ಬಾಬುರಾವ್‌ ಕಾರಬಾರಿ, ಶಕುಂತಲಾ ಬೆಲ್ದಾಳೆ, ಪೀರಪ್ಪ ಔರಾದೆ, ಕಿರಣ್ ಪಾಟೀಲ್‌, ಮಾಧವ್‌ ಹಸುರೆ, ಈಶ್ವರ ಸಿಂಗ್ ಠಾಕೂರ್‌, ಸಂಜಯ್‌ ಪಟವಾರಿ, ರಾಜಶೇಖರ್ ನಾಗಮೂರ್ತಿ, ರಾಜರೆಡ್ಡಿ ಶಾಬಾದ್‌ ಪಾಲ್ಗೊಂಡಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.