ADVERTISEMENT

ಭಾಲ್ಕಿ: ರಕ್ತ ಲೇಪನ ಸಂಗ್ರಹಾಲಯ ಕಟ್ಟಡ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 15:32 IST
Last Updated 13 ಸೆಪ್ಟೆಂಬರ್ 2024, 15:32 IST
ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಹೊಸ ಆಂಬುಲೆನ್ಸ್ ಅನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಿದರು
ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಹೊಸ ಆಂಬುಲೆನ್ಸ್ ಅನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಿದರು   

ಭಾಲ್ಕಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ₹80 ಲಕ್ಷ ಅನುದಾನದಡಿ ನಿರ್ಮಿಸಲಾದ ನೂತನ ರಕ್ತ ಲೇಪನ ಸಂಗ್ರಹಾಲಯ ಕಟ್ಟಡ, ಸ್ಕ್ಯಾನಿಂಗ್ ಸೆಂಟರ್, ಹಾಗೂ ಆಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಹೊಸ ಅಂಬುಲೆನ್ಸ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು, ತಾಲ್ಲೂಕಿನ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲ ಅಗತ್ಯ, ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇವುಗಳಿಂದ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬಡ ರೋಗಿಗಳಿಗೆ ತ್ವರಿತ ಮತ್ತು ಸಮರ್ಪಕ ಆರೋಗ್ಯಸೇವೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅಬ್ದುಲ್ ಖಾದರ್ ಸೇರಿದಂತೆ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.