ADVERTISEMENT

ಜನವಾಡ| ರಕ್ತದಾನ ಶಿಬಿರ: 40 ವಿದ್ಯಾರ್ಥಿಗಳಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 6:19 IST
Last Updated 15 ನವೆಂಬರ್ 2025, 6:19 IST
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು
ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು   

ಗೋರನಳ್ಳಿ(ಜನವಾಡ): ಕಲಬುರಗಿಯ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಿಣಿ ಹಾಗೂ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ದೊಡ್ಡಪ್ಪ ಎಸ್‌ ಅಪ್ಪ ಅವರ ಜನ್ಮದಿನದ ನಿಮಿತ್ತ ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ರಕ್ತದಾನ ಶಿಬಿರ ನಡೆಯಿತು.

ಶಿಬಿರದಲ್ಲಿ 40 ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾಗಿದೆ ಎಂದು ಹೇಳಿದರು.

ADVERTISEMENT

ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ ಅವರು ರಕ್ತದಾನದ ಮಹತ್ವ ವಿವರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡಿ ಶಿಬಿರಕ್ಕೆ ಚಾಲನೆ ನೀಡಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಂಗಾರೆಡ್ಡಿ, ಕಾಲೇಜು ಪ್ರಾಚಾರ್ಯೆ ವಿನಿತಾ ಪಾಟೀಲ, ಶರಣಬಸವೇಶ್ವರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ಪ್ರತಾಪುರ, ಎನ್.ಎಸ್.ಎಸ್. ಅಧಿಕಾರಿ ಬಸವಲಿಂಗ ಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.