ADVERTISEMENT

ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯ: ಬಿಜೆಪಿ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 6:26 IST
Last Updated 17 ಜನವರಿ 2026, 6:26 IST
ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವುದರಿಂದ ಪಕ್ಷದ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ವಿಜಯೋತ್ಸವ ಆಚರಿಸಿದರು
ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವುದರಿಂದ ಪಕ್ಷದ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ವಿಜಯೋತ್ಸವ ಆಚರಿಸಿದರು   

ಬೀದರ್: ಮಹಾರಾಷ್ಟ್ರದಲ್ಲಿ ನಡೆದ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿರುವುದರಿಂದ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ವಿಜಯೋತ್ಸವ ಆಚರಿಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ‌

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, ಬಿಎಂಸಿ ಚುನಾವಣೆಯಲ್ಲಿ ದೊರೆತ ಭರ್ಜರಿ ಜಯವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಮಹಾರಾಷ್ಟ್ರದಲ್ಲಿ ಪಕ್ಷದ ಸಂಘಟನೆ ಬಲಿಷ್ಠವಾಗಿರುವುದು ತೋರಿಸುತ್ತದೆ. ಈ ಗೆಲುವು ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಮುಖಂಡರಾದ ವಿಜಯ್ ಕುಮಾರ್ ಪಾಟೀಲ್ ಗಾದಗಿ, ರಾಜಕುಮಾರ್ ಚಿದ್ರಿ, ಶಶಿಧರ್ ಹೊಸಳ್ಳಿ, ರಾಜಶೇಖರ್ ನಾಗಮೂರ್ತಿ, ಶ್ರೀನಿವಾಸ ಚೌದ್ರಿ, ರಾಜಕುಮಾರ್ ನೆಮತಾಬಾದ್, ಸುಭಾಷ್ ಮಡಿವಾಳ, ಗುರುನಾಥ ಜ್ಯಾಂತಿಕರ್, ರೋಷನ್ ವರ್ಮಾ, ನರೇಶ್ ಗೌಳಿ, ಗಣೇಶ್ ಭೋಸ್ಲೆ, ಬಾಬುರಾವ್ ಕಾರಬಾರಿ, ನಿತಿನ್, ಭೂಷಣ್ ಪಾಠಕ್‌, ವೀರೇಶ್ ಸ್ವಾಮಿ, ಸಂತೋಷ ರೆಡ್ಡಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.