ADVERTISEMENT

ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 15:10 IST
Last Updated 17 ಜನವರಿ 2022, 15:10 IST

ಬೀದರ್‌: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

‌ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ₹ 15 ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್ಸೆಸ್ಸೆಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲ ಎಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560002 ವಿಳಾಸಕ್ಕೆ ಫೆಬ್ರುವರಿ 15 ರೊಳಗಾಗಿ ಕಳುಹಿಸಿಕೊಡಬೇಕು.

ADVERTISEMENT

ವಿವರಗಳಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002, ವೆಬ್ಸೈಟ್ www.kannadapustakapradhikara.com, ದೂ.ಸಂ. 080-22484516, 22107704ಗೆ ಸಂಪರ್ಕಿಸಬಹುದಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.