ADVERTISEMENT

ಮೀಸಲಾತಿ ಹೆಚ್ಚಿಸದಿದ್ದರೆ ಜಯಂತಿ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 12:51 IST
Last Updated 30 ಸೆಪ್ಟೆಂಬರ್ 2022, 12:51 IST
ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾ ಟೋಕರೆ ಕೋಳಿ ಸಮಾಜದ ಮುಖಂಡರು ಬೀದರ್‌ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು
ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾ ಟೋಕರೆ ಕೋಳಿ ಸಮಾಜದ ಮುಖಂಡರು ಬೀದರ್‌ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು   

ಬೀದರ್: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸದಿದ್ದರೆ ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲಾಗುವುದು ಎಂದು ಜಿಲ್ಲಾ ಟೋಕರೆ ಕೋಳಿ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷ ಜಗನ್ನಾಥ ಜಮಾದಾರ್, ವಾಲ್ಮೀಕಿ ಸಮಾಜ ಸಂಘದ ಪಾಧ್ಯಕ್ಷ ಮಾರುತಿ ಮಾಸ್ಟರ್, ಪ್ರಮುಖರಾದ ಸುನೀಲ್ ಕಾಶೆಂಪುರ, ಸುನೀಲ್ ಭಾವಿಕಟ್ಟಿ, ಅಪ್ಪಾರಾವ್ ಬಾಲಹಳ್ಳಿ, ಪಾಂಡುರಂಗ ಗುರೂಜಿ, ಶರಣಪ್ಪ ಅಣ್ಣಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.