ADVERTISEMENT

ಬ್ರಿಮ್ಸ್‌ನಲ್ಲಿ ಫ್ರೆಶ್ ಫ್ರೋಜನ್ ಬಯೋಪ್ಸಿ ಸೇವೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 8:52 IST
Last Updated 28 ಫೆಬ್ರುವರಿ 2026, 8:52 IST
ಬಯೋಪ್ಸಿ ಸಾಧನ
ಬಯೋಪ್ಸಿ ಸಾಧನ   

ಬೀದರ್: ನಗರದ ಬ್ರಿಮ್ಸ್‌ನಲ್ಲಿ ಪ್ಯಾಥೋಲಜಿ ವಿಭಾಗದಿಂದ ಫ್ರೆಶ್ ಫ್ರೋಜನ್ ಸೆಕ್ಷನ್ ಬಯೋಪ್ಸಿ ಸೇವೆ ಸೇವೆ ಆರಂಭಿಸಲಾಗಿದೆ ಎಂದು ಬ್ರಿಮ್ಸ್‌ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ತಿಳಿಸಿದ್ದಾರೆ.

ಈ ಕುರಿತು ಬ್ರಿಮ್ಸ್ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ, ಪ್ರಾಂಶುಪಾಲ ಡಾ. ರಾಜೇಶ್ ಪಾರಾ, ವೈದ್ಯಕೀಯ ಅಧೀಕ್ಷಕ ಡಾ. ಎಸ್.ಎಸ್. ಬಾಲಿ ಶುಕ್ರವಾರ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸೌಲಭ್ಯವು ಶಸ್ತ್ರಚಿಕಿತ್ಸೆಯ ಸಮಯದಲ್ಲೇ ತ್ವರಿತ ನಿರ್ಣಯಕ್ಕೆ ಸಹಾಯ ಮಾಡುತ್ತದೆ. ಶಸ್ತ್ರಚಿಕಿತ್ಸಕರಿಗೆ ಸಮಯೋಚಿತ ಹಾಗೂ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆ ಹಾಗೂ ಪ್ರಸೂತಿ–ಸ್ತ್ರೀರೋಗ ವಿಭಾಗಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಬಹುದಾಗಿದೆ. ರೋಗಿಗಳ ಆರೈಕೆ ಹಾಗೂ ಉತ್ತಮ ಚಿಕಿತ್ಸಾ ಫಲಿತಾಂಶ ದೊರೆಯುತ್ತದೆ ಎಂದು ಹೇಳಿದ್ದಾರೆ. 

ADVERTISEMENT

ಸರ್ವೈಕಲ್‌ ಕ್ಯಾನ್ಸರ್‌, ಅಂಡಾಶಯ ಗಡ್ಡೆ ತೆಗೆಯಲು ಬಳಸುವ ಶಸ್ತ್ರಚಿಕಿತ್ಸೆಯಲ್ಲಿ ಇದು ಸಹಕಾರಿಯಾಗಲಿದೆ. ಹೆಚ್ಚಿನ ಮಾಹಿತಿಗೆ ಬ್ರಿಮ್ಸ್‌ ಪ್ಯಾಥೊಲಜಿ ವಿಭಾಗದ ಮೊಬೈಲ್ ಸಂಖ್ಯೆ: 7019092015 ಸಂಪರ್ಕಿಸಲು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.