ADVERTISEMENT

ಶಿಕ್ಷಕರ ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ: ಸಲೀಂ ಪಾಶಾ ಹೇಳಿಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಉಪ ನಿರ್ದೇಶಕ ಸಲೀಂ ಪಾಶಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 15:03 IST
Last Updated 7 ಡಿಸೆಂಬರ್ 2022, 15:03 IST
ಬೀದರ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಉಪ ನಿರ್ದೇಶಕ ಸಲೀಂ ಪಾಶಾ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಉಪ ನಿರ್ದೇಶಕ ಸಲೀಂ ಪಾಶಾ ಅವರನ್ನು ಸನ್ಮಾನಿಸಲಾಯಿತು   

ಬೀದರ್: ‘ಶಿಕ್ಷಕರ ಏನೇ ಸಮಸ್ಯೆಗಳಿದ್ದರೂ ನೇರವಾಗಿ ತಮ್ಮ ಗಮನಕ್ಕೆ ತರಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಉಪ ನಿರ್ದೇಶಕ ಸಲೀಂ ಪಾಶಾ ಹೇಳಿದರು.

ನಗರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಶಿಕ್ಷಕರ ಸಮಸ್ಯೆ ಹಾಗೂ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ಅವರು ಸಲೀಂ ಪಾಶಾ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

ಸಂಘಟನಾ ಕಾರ್ಯದರ್ಶಿ ಸೈಯದ್ ಅಸ್ಲಂ, ಖಜಾಂಚಿ ನರಸಪ್ಪ ಕೀರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ಬಾಬುರಾವ್ ಮಜ್ಜಿಗೆ, ಕಾರ್ಯದರ್ಶಿ ಮಹಮ್ಮದ್ ಮಕ್ಸೂದ್ ಅಲಿ, ಶಿಕ್ಷಕರ ವಿವಿಧ ಸಂಘಗಳ ಶ್ರೀನಿವಾಸ ರೆಡ್ಡಿ, ಗೋವಿಂದ ಪೂಜಾರಿ, ಸುರೇಶ ಟಾಳೆ, ಸರಸ್ವತಿ ಕಾಡವಾದ, ಯಾಸೀರ್ ಆರಿಫತ್, ಆಫ್ರಿನ್, ರೈಸ್ ಫಾತಿಮಾ, ಈಶ್ವರ, ಪ್ರಕಾಶ ರೆಡ್ಡಿ, ಧನರಾಜ ಪೋಸ್ತೆ, ರಸಿಕಾ ಕುಲಕರ್ಣಿ ಹಾಗೂ ಶಾರದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.