ADVERTISEMENT

ಬ್ರಿಮ್ಸ್‌ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್: ಸೀಟು ಪಡೆಯಲು ಅವಕಾಶ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 12:33 IST
Last Updated 4 ಜನವರಿ 2023, 12:33 IST
ರಾಜಕುಮಾರ ಮಾಳಗೆ
ರಾಜಕುಮಾರ ಮಾಳಗೆ   

ಬೀದರ್: ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಗೆ ಅನುಮತಿ ನೀಡಲಾದ ಬಿ.ಎಸ್ಸಿ ನರ್ಸಿಂಗ್ ಕೋರ್ಸ್‍ಗೆ ವಿದ್ಯಾರ್ಥಿಗಳಿಗೆ ಮೂರನೇ ಸುತ್ತಿನ ಕೌನ್ಸೆಲಿಂಗ್‍ನಲ್ಲಿ ಸೀಟು ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬ್ರಿಮ್ಸ್ ಬಿ.ಎಸ್ಸಿ ನರ್ಸಿಂಗ್ ಮಹಾವಿದ್ಯಾಲಯದ ಪ್ರಾಚಾರ್ಯ ರಾಜಕುಮಾರ ಮಾಳಗೆ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಈಗಾಗಲೇ ಮೊದಲ ಹಾಗೂ ಎರಡನೇ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಂಡಿವೆ. ಜ. 16ರ ವರೆಗೆ ವಿಸ್ತರಣೆ ಮಾಡಲಾದ ಮೂರನೇ ಸುತ್ತಿನ ಕೌನ್ಸೆಲಿಂಗ್‍ನಲ್ಲಿ ಮಹಾವಿದ್ಯಾಲಯದಲ್ಲಿ ಸೀಟು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಮಹಾವಿದ್ಯಾಲಯದಲ್ಲಿ 60 ಸೀಟುಗಳು ಲಭ್ಯ ಇವೆ. ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 45 ಅಂಕಗಳೊಂದಿಗೆ ಉತ್ತೀರ್ಣರಾದ ಸಾಮಾನ್ಯ ವರ್ಗದ, ಶೇ 40 ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕೋರ್ಸ್ ಪ್ರವೇಶಕ್ಕೆ ಅರ್ಹರು ಎಂದು ತಿಳಿಸಿದ್ದಾರೆ.

ADVERTISEMENT

ನಾಲ್ಕು ವರ್ಷಗಳ ಕೋರ್ಸ್ ಪೂರ್ಣಗೊಳಿಸಿದವರಿಗೆ ನರ್ಸಿಂಗ್ ಅಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ ಸೇರಿ ವಿವಿಧ ಉದ್ಯೋಗ ಅವಕಾಶಗಳು ದೊರಕಲಿವೆ. ವಿದೇಶದಲ್ಲೂ ಭಾರಿ ಬೇಡಿಕೆ ಇದೆ. ಜಿಲ್ಲೆಯ ವಿದ್ಯಾರ್ಥಿಗಳು ಕೋರ್ಸ್‍ನ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.