ADVERTISEMENT

ಔರಾದ್: ಕುಡಿಯುವ ನೀರಿಗಾಗಿ ಗ್ರಾ.ಪಂ.ಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 18 ಮೇ 2024, 14:17 IST
Last Updated 18 ಮೇ 2024, 14:17 IST
ಔರಾದ್ ತಾಲ್ಲೂಕಿನ ಕೌಠಾ ಗ್ರಾಮ ಪಂಚಾಯಿತಿ ಕಚೇರಿಗೆ ಜನ ಮುತ್ತಿಗೆ ಹಾಕಿ ಪ್ರತಿಭಟಿಸಿದರು
ಔರಾದ್ ತಾಲ್ಲೂಕಿನ ಕೌಠಾ ಗ್ರಾಮ ಪಂಚಾಯಿತಿ ಕಚೇರಿಗೆ ಜನ ಮುತ್ತಿಗೆ ಹಾಕಿ ಪ್ರತಿಭಟಿಸಿದರು   

ಔರಾದ್: ಕುಡಿಯುವ ನೀರು ಪೂರೈಸಲು ಆಗ್ರಹಿಸಿ ತಾಲ್ಲೂಕಿನ ಕೌಠಾ ಗ್ರಾಮಸ್ಥರು ಶನಿವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗ್ರಾಮದ ವಾರ್ಡ್ -1ರ ಮಹಿಳೆಯರು ಸೇರಿದಂತೆ ಅನೇಕರು ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿ ಕಚೇರಿಗೆ ಹೋದರು. ಆದರೆ ಸಮಸ್ಯೆಗೆ ಸ್ಪಂದನ ಸಿಗದ ಕಾರಣ ಸ್ಥಳದಲ್ಲೇ ಕೆಲ ಹೊತ್ತು ಧರಣಿ ಕುಳಿತು ಸಂಬಂಧಿತ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

‘ವಾರ್ಡ್-1ರ ಮೂಲಕ ಹಾದು ಹೋದ ಪೈಪ್ ಒಡೆದು ಹೋಗಿದೆ. ಹೀಗಾಗಿ ಟ್ಯಾಂಕಿಗೆ ನೀರು ಹೋಗುತ್ತಿಲ್ಲ. ಇದರಿಂದ ನಮ್ಮ ಗಲ್ಲಿಗೆ ಅನೇಕ ದಿನಗಳಿಂದ ನೀರು ಬರುತ್ತಿಲ್ಲ. ಪಂಚಾಯಿತಿಯವರಿಗೆ ಸಾಕಷ್ಟು ಸಲ ಹೇಳಿದರೂ ಪ್ರಯೋಜನವಾಗಿಲ್ಲ’ ಎಂದು ರಮೇಶ ಬಿರಾದಾರ್ ದೂರಿದರು.

ADVERTISEMENT

ವಿಷಯ ತಿಳಿದ ಸಂತಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರನ್ನು ಸಮಾಧಾನ ಮಾಡಿ ಆದಷ್ಟು ಬೇಗ ನೀರಿನ ವ್ಯವಸ್ಥೆ ಮಾಡಲು ಭರವಸೆ ನೀಡಿದರು.

ಓಂಕಾರ ಸ್ವಾಮಿ, ಶಿವಕುಮಾರ ಪಾಟೀಲ, ಮಲ್ಲಿಕಾರ್ಜುನ ಬಿರಾದಾರ, ಶಿವಾನಂದ ಹಾಗೂ ವಾರ್ಡ್ -1ರ ಮಹಿಳೆಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.