ADVERTISEMENT

ಇಬ್ರಾಹಿಂ ಹೇಳಿಕೆಗೆ ಬಿಎಸ್‌ವೈ ತಿರುಗೇಟು

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 8:37 IST
Last Updated 4 ಜೂನ್ 2019, 8:37 IST

ಬೀದರ್: ‘ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಗಂಡಸರು ಯಾರು ಎನ್ನುವುದು ಗೊತ್ತಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ಚುನಾವಣೆ ಪ್ರಚಾರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿಜೆಪಿಯಲ್ಲಿ ಗಂಡಸರೇ ಇಲ್ಲ’ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ನೀಡಿದ ಹೇಳಿಕೆಯನ್ನು ಖಂಡಿಸಿದರು.

‘ಕಲಬುರ್ಗಿಯ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಆಗ ಕಾಂಗ್ರೆಸ್ ನಾಯಕರಿಗೆ ಗಂಡಸರು ಯಾರು ಎನ್ನುವುದು ಗೊತ್ತಾಗಲಿದೆ’ ಎಂದು ಗುಡುಗಿದರು.

‘ಮಂಡ್ಯದಲ್ಲಿ ಸುಮಲತಾ ಹಾಗೂ ಅಂಬರೀಷ್‌ ಅವರನ್ನು ಅವಮಾನಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಜಾತಿ ರಾಜಕಾರಣದ ಮಾತನಾಡಿ ಎಲ್ಲರನ್ನೂ ಅವಮಾನ ಮಾಡುತ್ತಿದ್ದಾರೆ. ಈಗಾಗಲೇ ಜನರು ತಿರುಗಿ ಬಿದ್ದಿದ್ದಾರೆ. ಮಂಡ್ಯದಲ್ಲಿ ಸುಮಲತಾ ಗೆಲುವು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.