ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರಿಗೆ ಚಿದಂಬರ ಶಿಕ್ಷಣ ಸಂಸ್ಥೆಯಿಂದ ನಗರದಲ್ಲಿ ಇತ್ತೀಚೆಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಾಬಶೆಟ್ಟಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವು ಜನ ಸೇವೆಗೆ ದೊರೆತ ಅವಕಾಶವಾಗಿದೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷನಾಗಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದೇನೆ. ಪಕ್ಷ ಇದೀಗ ಹೊಸ ಜವಾಬ್ದಾರಿ ವಹಿಸಿದೆ. ಬರುವ ದಿನಗಳಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ದುಡಿಯುವೆ ಎಂದು ತಿಳಿಸಿದರು.
ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ್ ಸಂಸ್ಥೆಯ ಕಾರ್ಯದರ್ಶಿ ಚನ್ನಬಸಪ್ಪ ಹಾಲಹಳ್ಳಿ ಆಡಳಿತ ಮಂಡಳಿ ಸದಸ್ಯರಾದ ಶಿವಶರಣಪ್ಪ ಸಾವಳಗಿ ಶರಣಪ್ಪ ತಿರ್ಲಾಪುರೆ ಉದಯಭಾನು ಹಲವಾಯಿ ಮಡಿವಾಳಪ್ಪ ಗಂಗಶೆಟ್ಟಿ ಚಂದ್ರಕಾಂತ ಹಳ್ಳಿ ವಿಜಯಕುಮಾರ ಬಿರಾದಾರ ಡಾ. ಸಿ. ಆನಂದರಾವ್ ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.