ADVERTISEMENT

ಬುಡಾ ಅಧ್ಯಕ್ಷ ಬಾಬು ವಾಲಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 15:48 IST
Last Updated 1 ಡಿಸೆಂಬರ್ 2020, 15:48 IST
ಬೀದರ್‌ನ ಬುಡಾ ಕಚೇರಿಯಲ್ಲಿ ಮಂಗಳವಾರ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಅಧಿಕಾರ ವಹಿಸಿಕೊಂಡರು
ಬೀದರ್‌ನ ಬುಡಾ ಕಚೇರಿಯಲ್ಲಿ ಮಂಗಳವಾರ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಅಧಿಕಾರ ವಹಿಸಿಕೊಂಡರು   

ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮಂಗಳವಾರ ಬುಡಾ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಬಿಜೆಪಿ ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ನೂತನ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಅವರು ಬಾಬು ವಾಲಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.