ಚಿಟಗುಪ್ಪ (ಹುಮನಾಬಾದ್ ): ‘ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಮಹಾನ್ ಚೇತನ ಭಗವಾನ್ ಗೌತಮ ಬುದ್ಧ’ ಎಂದು ತಹಶೀಲ್ದಾರ್ ಮಂಜುನಾಥ್ ಪಂಚಾಳ್ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದುರಾಸೆ ಮತ್ತು ಹಿಂಸೆಯನ್ನು ಬಿಟ್ಟು ಎಲ್ಲರನ್ನು ಪ್ರೀತಿಸು ಸುಖ ಮತ್ತು ಶಾಂತಿ ಹಾಗೂ ನೆಮ್ಮದಿಯ ಬದುಕು ಕಂಡುಕೊಳ್ಳಲು ಸಾಧ್ಯ ಎಂದು ಜಗತ್ತಿಗೆ ತಿಳಿಸಿದ ಮಹಾನ್ ಚೇತನ ಬುದ್ಧ. ಅವರ ತತ್ವ ಸಿದ್ಧಾಂತಗಳು ಪ್ರಸ್ತುತ ಸನ್ನಿವೇಶಕ್ಕೆ ಅತ್ಯಂತ ಅವಶ್ಯಕವಾಗಿದೆ’ ಎಂದರು.
ಈ ಸಂದರ್ಭದಲ್ಲಿ ಸುಭಾಷ್ ಸುಲೆಪೇಟ್ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.