ADVERTISEMENT

ಹೊಸ ತಾಲ್ಲೂಕುಗಳಲ್ಲಿ ಗ್ರಂಥಾಲಯ ನಿರ್ಮಿಸಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 15:00 IST
Last Updated 18 ಫೆಬ್ರುವರಿ 2021, 15:00 IST
ಬೀದರ್‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 67ನೇ ಆಯವ್ಯಯ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಮಾತಮಾಡಿದರು. ಗರಿಮಾ ಪನ್ವಾರ್‌ ಇದ್ದಾರೆ
ಬೀದರ್‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 67ನೇ ಆಯವ್ಯಯ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಮಾತಮಾಡಿದರು. ಗರಿಮಾ ಪನ್ವಾರ್‌ ಇದ್ದಾರೆ   

ಬೀದರ್‌: ‘ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ತಾಲ್ಲೂಕುಗಳಲ್ಲಿ ಗ್ರಂಥಾಲಯಗಳ ನಿರ್ಮಾಣ ಮಾಡಬೇಕು’ ಎಂದು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ರಾಮಚಂದ್ರನ್ ಆರ್. ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 67ನೇ ಆಯವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಡಿಜಿಟಲ್ ಗ್ರಂಥಾಲಯ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡಬೇಕು. 30 ವರ್ಷಗಳಿಗಿಂತ ಹಳೆಯದಾದ ಗ್ರಂಥಾಲಯ ಕಟ್ಟಡಗಳನ್ನು ನೆಲಸಮಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಮುಖ್ಯ ಗ್ರಂಥಾಲಯ ಅಧಿಕಾರಿಗೆ ಸೂಚಿಸಿದರು.

ADVERTISEMENT

‘ಐಎನ್‍ಎಫ್‍ಎಲ್‍ಐಬಿಎನ್‍ಇಟಿ ಸಹಯೋಗದೊಂದಿಗೆ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ಓದುಗರಿಗೆ ಅನುಕೂಲವಾಗುವಂತೆ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಬೇಕು’ ಎಂದು ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಪ್ರಾಚಾರ್ಯ ಸಲಹೆ ನೀಡಿದರು

‘ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಹಳೆಯ ಕಟ್ಟಡಗಳ ನವೀಕರಣ ಮಾಡಬೇಕು. ಎಲ್ಲ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಪ್ರವೀಣಕುಮಾರ ಮಿರಾಗಂಜಕರ್ ಮನವಿ ಮಾಡಿದರು.

ಗ್ರಂಥಾಲಯ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸಿದ್ಧಾರ್ಥ ಸಭೆಗೆ ಮಾಹಿತಿ ನೀಡಿದರು.

ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸಮಿತಿ ಸದಸ್ಯರಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ, ವಕೀಲ ಅಬ್ದುಲ್ ವಹೀದ್, ಕ್ಷೇತ್ರ ಶಿಕ್ಷಣಾಧಿಕಾರಿ, ವಾರ್ತಾ ಇಲಾಖೆಯ ವಿಶ್ವನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.