ADVERTISEMENT

ಹುಮನಾಬಾದ್ | ಕಾರ ಹುಣ್ಣಿಮೆ: ಎತ್ತುಗಳ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 13:04 IST
Last Updated 11 ಜೂನ್ 2025, 13:04 IST
ಹುಮನಾಬಾದ್ ಪಟ್ಟಣದಲ್ಲಿ ಬಸವರಾಜ ಆರ್ಯ ಅವರು ಎತ್ತುಗಳಿಗೆ ಸಿಂಗಾರ ಮಾಡಿ ಮೆರವಣಿಗೆ ಮಾಡಿದರು
ಹುಮನಾಬಾದ್ ಪಟ್ಟಣದಲ್ಲಿ ಬಸವರಾಜ ಆರ್ಯ ಅವರು ಎತ್ತುಗಳಿಗೆ ಸಿಂಗಾರ ಮಾಡಿ ಮೆರವಣಿಗೆ ಮಾಡಿದರು   

ಹುಮನಾಬಾದ್: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಕಾರ ಹುಣ್ಣಿಮೆ ಸಂಭ್ರಮದಿಂದ ಆಚರಿಸಲಾಯಿತು.

ಬುಧವಾರ ನಸುಕಿನ ಜಾವ ರೈತರು ಎತ್ತುಗಳ ಮೈ ತೊಳೆದು ಬಣ್ಣ ಹಚ್ಚಿದರು. ಗೆಜ್ಜೆ ಸರ ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳಿಂದ ಸಿಂಗರಿಸಿದರು.

ಹೋಳಿಗೆ ಸೇರಿದಂತೆ ವಿವಿಧ ರೀತಿಯ ಸಿಹಿ ತಿಂಡಿ ಮಾಡಿ ಎತ್ತುಗಳಿಗೆ ತಿನ್ನಿಸಿದರು.

ADVERTISEMENT

‘ರೈತರು ಸಂಭ್ರಮದಿಂದ ಆಚರಿಸುವ ಹಬ್ಬ ಕಾರ ಹುಣ್ಣಿಮೆ. ಬೇಸಿಗೆಯಲ್ಲಿ ಎತ್ತುಗಳಿಂದ ಭೂಮಿ ಉಳುಮೆ ಮಾಡ ಲಾಗುತ್ತದೆ. ನಂತರ ಕಾರ ಹುಣ್ಣಿಮೆ ಸಂದರ್ಭದಲ್ಲಿ ಅವುಗಳಿಗೆ ವಿಶ್ರಾಂತಿ ನೀಡಲಾಗುತ್ತದೆ. ನಂತರ ಮುಂಗಾರು ಮಳೆಯಾಗುತ್ತಿದ್ದಂತೆ ಮತ್ತೆ ಉಳುಮೆಗೆ ಎತ್ತುಗಳನ್ನು ಕಟ್ಟಲಾಗುತ್ತದೆ. ಹೀಗಾಗಿ ಕಾರ ಹುಣ್ಣಿಮೆಯನ್ನು ಪ್ರತಿ ವರ್ಷ ಸಂಭ್ರಮದಿಂದ ಆಚರಿಸುತ್ತೇವೆ’ ಎಂದು ರೈತ ಸಂಗಮೇಶ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.