ಕಮಲನಗರ: ತಾಲ್ಲೂಕಿನ ಸಾವಳಿ ಗ್ರಾಮದ ಬಳಿ ಬೀದರ್-ನಾಂದೇಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ಬುಧವಾರ ಮಧ್ಯಾಹ್ನ ಜರುಗಿದೆ.
ಭಾಲ್ಕಿ ಘಟಕಕ್ಕೆ ಸೇರಿದ ಕೆಎ38 ಎಫ್1031 ಬಸ್ ಭಾಲ್ಕಿಯಿಂದ ಕಮಲನಗರ ಮಾರ್ಗವಾಗಿ ಉದಗೀರ ಪಟ್ಟಣದ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ತೆಲಂಗಾಣ ಸಾರಿಗೆ ಬಸ್ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೆದ್ದಾರಿ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ರಸ್ತೆಯ ಒಂದೇ ಭಾಗದಿಂದ ವಾಹನ ಸಂಚಾರ ನಡೆಯುತ್ತಿದೆ. ಇದರಿಂದ ಎದುರುಗಡೆಯಿಂದ ಬರುತ್ತಿದ್ದ ಬಸನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮುಳ್ಳಿನ ಗಿಡಗಳಲ್ಲಿ ಉರುಳಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ.
‘ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ’ ಎಂದು ಭಾಲ್ಕಿ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.