ADVERTISEMENT

ಕ್ಯಾನ್ಸರ್ ಜಾಗೃತಿ ಜಾಥಾ

ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 10:35 IST
Last Updated 6 ಫೆಬ್ರುವರಿ 2020, 10:35 IST
ಬೀದರ್‌ನಲ್ಲಿ ಮಂಗಳವಾರ ವಿಶ್ವ ಕ್ಯಾನ್ಸರ್‌ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ಯಾನ್ಸರ್‌ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್ ಚಾಲನೆ ನೀಡಿದರು
ಬೀದರ್‌ನಲ್ಲಿ ಮಂಗಳವಾರ ವಿಶ್ವ ಕ್ಯಾನ್ಸರ್‌ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ಯಾನ್ಸರ್‌ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್ ಚಾಲನೆ ನೀಡಿದರು   

ಬೀದರ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ವತಿಯಿಂದ ಮಂಗಳವಾರ ವಿಶ್ವ ಕ್ಯಾನ್ಸರ್‌ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ಯಾನ್ಸರ್‌ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಯಾಗಿದ್ದು, ಸಾರ್ವಜನಿಕರು ಶುದ್ಧ ಹಾಗೂ ಪೌಷ್ಟಿಕಾಂಶ ಆಹಾರ ಸೇವನೆ ಮಾಡಬೇಕು. ಅಲ್ಲದೆ ದುಷ್ಚಟಗಳಿಂದ ದೂರವಿರಬೇಕು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ಮಾತನಾಡಿ,‘ 30 ವರ್ಷಗಳ ನಂತರ ಕ್ಯಾನ್ಸರ್‌ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ ತಪಾಸಣೆ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ನಿಯಮಿತವಾಗಿ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಎಲ್‌.ಕೃಷ್ಣಾರೆಡ್ಡಿ, ಡಾ.ರಾಜಶೇಖರ ಪಾಟೀಲ, ಡಾ.ಇಂದುಮತಿ ಪಾಟೀಲ, ಡಾ.ಅನಿಲ ಚಿಂತಾಮಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.