ADVERTISEMENT

ಸಿ.ಬಿ.ಸೋಮಶೆಟ್ಟಿಗೆ ಅನುಭವಮಂಟಪ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 7:10 IST
Last Updated 13 ನವೆಂಬರ್ 2025, 7:10 IST
<div class="paragraphs"><p>ಸಿ.ಬಿ.ಸೋಮಶೆಟ್ಟಿ</p></div>

ಸಿ.ಬಿ.ಸೋಮಶೆಟ್ಟಿ

   

ಭಾಲ್ಕಿ (ಬೀದರ್‌ ಜಿಲ್ಲೆ): ಡಾ.ಚನ್ನಬಸವ ಪಟ್ಟದ್ದೇವರು ಅನುಭವಮಂಟಪ ಪ್ರಶಸ್ತಿಗೆ ಬೀದರ್‌ನ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಬುಧವಾರ ಘೋಷಿಸಿದ್ದಾರೆ.

ಬಸವಕಲ್ಯಾಣದಲ್ಲಿ ನ.29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ADVERTISEMENT

ಬಸವಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿಗೆ ಶಿರೂರಿನ ನಾಟಕಕಾರ ಬಸವರಾಜ ಬೇಂಗೇರಿ, ಅನುಭವಮಂಟಪ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ ಆಯ್ಕೆಯಾಗಿದ್ದಾರೆ. ಈ ಮೂರೂ ಪ್ರಶಸ್ತಿಯು ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿವೆ.

ಡಾ.ಎಂ.ಎಂ.ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿಗೆ ಹೊಸಪೇಟೆಯ ಚಿಂತಕ ಕೆ.ರವೀಂದ್ರನಾಥ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 50 ಸಾವಿರ ಹಾಗೂ ಫಲಕ ಹೊಂದಿದೆ.

ಶರಣ ವೈದ್ಯ ಸಂಗಣ್ಣ ಪ್ರಶಸ್ತಿಗೆ ಮಹಾರಾಷ್ಟ್ರದ ದೇಗಲೂರಿನ ಪ್ರಸಿದ್ಧ ವೈದ್ಯ ಮಲ್ಲಿಕಾರ್ಜುನ ರಗಟೆ, ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ (2024)ಗೆ ಖಾನಾಪೂರದ ಸಾವಯವ ಕೃಷಿಕ ರಮೇಶ ಮೋರ್ಗೆ, ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ (2025)ಯನ್ನು ಹುಡಗಿಯ ಸಾವಯವ ಕೃಷಿಕ ಸೋಮಶಂಕರ ಅವರಿಗೆ ನೀಡಲಾಗುತ್ತಿದೆ. ಈ ಪ್ರಶಸ್ತಿಗಳು ತಲಾ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.