ADVERTISEMENT

ಸಂತ ಸೇವಾಲಾಲ್ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 15:19 IST
Last Updated 15 ಫೆಬ್ರುವರಿ 2021, 15:19 IST
ಬೀದರ್ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಂತ ಸೇವಾಲಾಲ್‌ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲ್‌ ಭಾವಚಿತ್ರಕ್ಕೆ ಸಂಸದ ಭಗವಂತ ಖೂಬಾ ಪೂಜೆ ಸಲ್ಲಿಸಿದರು. ಜಿಲ್ಲಾಧಿಕಾರಿ ರಾಮಚಂದ್ರನ್ ಇದ್ದಾರೆ
ಬೀದರ್ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಂತ ಸೇವಾಲಾಲ್‌ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲ್‌ ಭಾವಚಿತ್ರಕ್ಕೆ ಸಂಸದ ಭಗವಂತ ಖೂಬಾ ಪೂಜೆ ಸಲ್ಲಿಸಿದರು. ಜಿಲ್ಲಾಧಿಕಾರಿ ರಾಮಚಂದ್ರನ್ ಇದ್ದಾರೆ   

ಬೀದರ್: ‘ಸಂತರು ಹಾಗೂ ಮಹಾ ಪುರುಷರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಅವರ ಸೇವೆಯನ್ನು ಸ್ಮರಿಸಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸೇವಾಲಾಲ್‌ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾ ಪುರುಷರು ಸ್ವಾರ್ಥವನ್ನು ಬದಿಗೊತ್ತಿ ಸಮಾಜದ ಒಳಿತಾಗಿ ಬದುಕು ಸವಿಸಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಸವರಾಜ ಪವಾರ ಹಾಗೂ ಬಂಜಾರಾ ಸಮಾಜದ ಮುಖಂಡರು ಇದ್ದರು.

ಜಿಲ್ಲಾ ಪಂಚಾಯಿತಿ ಕಚೇರಿ: ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಂತ ಸೇವಾಲಾಲ್‌ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ ಹಾಗೂ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ, ಉಪ ಕಾರ್ಯದರ್ಶಿ ಸೂರ್ಯಕಾಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.