ADVERTISEMENT

ಜಿ.ಎನ್. ಫೌಂಡೇಶನ್‌ನಿಂದ 2,000 ಮಾಸ್ಕ್ ವಿತರಣೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 16:23 IST
Last Updated 28 ಮಾರ್ಚ್ 2020, 16:23 IST
ಬೀದರ್‌ನಲ್ಲಿ ಶನಿವಾರ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ನಿರ್ದೇಶಕ ಡಾ. ರಜನೀಶ ವಾಲಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರಿಗೆ ಮಾಸ್ಕ್‌ಗಳನ್ನು ವಿತರಿಸಿದರು. ಅರುಣ ಪಾಟೀಲ, ಆದೀಶ್ ವಾಲಿ, ಜಯಕುಮಾರ ಕಾಂಗೆ, ಕೃಷ್ಣಾರೆಡ್ಡಿ ಇದ್ದರು
ಬೀದರ್‌ನಲ್ಲಿ ಶನಿವಾರ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ನಿರ್ದೇಶಕ ಡಾ. ರಜನೀಶ ವಾಲಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರಿಗೆ ಮಾಸ್ಕ್‌ಗಳನ್ನು ವಿತರಿಸಿದರು. ಅರುಣ ಪಾಟೀಲ, ಆದೀಶ್ ವಾಲಿ, ಜಯಕುಮಾರ ಕಾಂಗೆ, ಕೃಷ್ಣಾರೆಡ್ಡಿ ಇದ್ದರು   

ಬೀದರ್: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಕೈಜೋಡಿಸಬೇಕು ಎನ್ನುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕರೆಗೆ ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಸ್ಪಂದಿಸಿದೆ. ಪೊಲೀಸ್‌ ಇಲಾಖೆಗೆ ಮಾಸ್ಕ್, ಹ್ಯಾಂಡ್‍ವಾಶ್, ಮಲ್ಟಿವಿಟಾಮಿನ್ ಮಾತ್ರೆಗಳನ್ನು ನೀಡುವ ಮೂಲಕ ನೆರವಾಗಿದೆ.

ಡಾ. ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ನಿರ್ದೇಶಕ ಡಾ. ರಜನೀಶ ವಾಲಿ, ಜಯಕುಮಾರ ಕಾಂಗೆ, ಸಿಇಒ ಕೃಷ್ಣಾರೆಡ್ಡಿ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ, ಫೌಂಡೇಶನ್ ಪರವಾಗಿ 2,000 ಮಾಸ್ಕ್, ಹ್ಯಾಂಡ್‍ವಾಶ್ ಮತ್ತಿತರ ಸಾಮಗ್ರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ಅವರಿಗೆ ನೀಡಿದರು.

ಫೌಂಡೇಶನ್ ಕಾರ್ಯಕ್ಕೆ ನಾಗೇಶ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅರುಣ ಪಾಟೀಲ, ಆದೀಶ್ ವಾಲಿ ಇದ್ದರು.

ADVERTISEMENT

‘ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸಮುದಾಯವೂ ಭಾಗಿಯಾಗಬೇಕು. ಸರ್ಕಾರದ ಆದೇಶ, ಸೂಚನೆಗಳನ್ನು ಚಾಚೂತಪ್ಪದೆ ಪಾಲಿಸಬೇಕು’ ಎಂದು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.

‘ಲಾಕ್‍ಡೌನ್ ಪ್ರಯುಕ್ತ ಬಡವರು, ಕೂಲಿಕಾರ್ಮಿಕರು ಕಷ್ಟಕ್ಕೆ ಸಿಲುಕಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಡಿತರ ವಿತರಣೆ ಸೇರಿದಂತೆ ಬಡವರಿಗೆ ಅಗತ್ಯ ನೆರವು ನೀಡುವುದಾಗಿ ಈಗಾಗಲೇ ಪ್ರಕಟಿಸಿದ್ದಾರೆ. ಕಷ್ಟದಲ್ಲಿದ್ದವರು ಎದೆಗುಂದಬಾರದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯವಿರುವ ಎಲ್ಲ ನೆರವನ್ನು ನೀಡಲಿವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.