ADVERTISEMENT

ಕೇಂದ್ರ ರಾಜ್ಯವನ್ನು ನಿರ್ಲಕ್ಷಿಸಿಲ್ಲ: ಸಂಸದ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 15:23 IST
Last Updated 5 ಅಕ್ಟೋಬರ್ 2019, 15:23 IST
ಸಂಸದ ಭಗವಂತ ಖೂಬಾ
ಸಂಸದ ಭಗವಂತ ಖೂಬಾ   

ಬೀದರ್: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಅನುದಾನ ಒದಗಿಸುವಲ್ಲಿ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ನೆರೆ ಪರಿಹಾರಕ್ಕೆ ಸಂಬಂಧಿಸಿದ ಕೆಲ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣವೇ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಆದರೆ, ವಿರೋಧ ಪಕ್ಷಗಳು ಪ್ರಧಾನಿ ಹಾಗೂ ರಾಜ್ಯದ ಬಿಜೆಪಿಯ 25 ಸಂಸದರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನೆರೆ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ₹1,200 ಕೋಟಿ, ಶನಿವಾರ ₹897 ಕೋಟಿ ಒದಗಿಸಿದೆ. ರಾಜ್ಯ ಸರ್ಕಾರ ₹ 303 ಕೋಟಿ ಕೊಟ್ಟಿದೆ. ಮಧ್ಯಂತರ ಪರಿಹಾರವಾಗಿ ಈವರೆಗೆ ಒಟ್ಟು ₹ 2,400 ಕೋಟಿ ನೀಡಿದಂತಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರವಾಹದಲ್ಲಿ ಸೂರು ಕಳೆದುಕೊಂಡವರಿಗೆ ಸರ್ಕಾರ ಪರ್ಯಾಯ ವ್ಯವಸ್ಥೆಯಾಗುವವರೆಗೆ ಬಾಡಿಗೆ ಹಣ ಕೊಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲ ಜಿಲ್ಲೆಗಳಿಗೆ ಓಡಾಡಿ ನೆರೆ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೊಡಗಿನಲ್ಲಿ ಪ್ರವಾಹದಲ್ಲಿ ಸೂರು ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದರು. ಆದರೆ, ಮನೆ ನಿರ್ಮಾಣ ಆಗಿಲ್ಲ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.