ಹುಮನಾಬಾದ್: ತಾಲ್ಲೂಕಿನ ಮಾಣಿಕ್ ನಗರದ ಚೆಸ್ ಪಾರ್ಕ್‌ಗೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಅವರು ಮಾತನಾಡಿ, ‘ಚೆಸ್ ಆಡುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಮಕ್ಕಳಿಂದ ವಯೋವೃದ್ಧರವರೆಗೂ ಚೆಸ್ ಆಡಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆಗಳೊಂದಿಗೆ ಆಕರ್ಷಕ ಉದ್ಯಾನ ನಿರ್ಮಾಣ ಮಾಡಿರುವುದು ಶ್ಲಾಘನೀಯವಾಗಿದೆ’ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಂಚಶೀಲ ಸಿದ್ದಪ್ಪ, ಉಪಾಧ್ಯಕ್ಷ ಮಾಣಿಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ ಬುಳ್ಳ ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.